ಯುವಜನತೆ ಜಗಜೀವನ್ ರಾಮ್ ರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಂಸದ ಧ್ರುವನಾರಾಯಣ್

Update: 2018-07-06 17:19 GMT

ಮೈಸೂರು,ಜು.6: ಮೈಸೂರು ಜಿಲ್ಲಾಡಳಿತದ ವತಿಯಿಂದ ಡಾ. ಬಾಬು ಜಗಜೀವನರಾಮ್ ಅವರ 32 ನೇ ವರ್ಷದ ಪುಣ್ಯಸ್ಮರಣೆಯನ್ನು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನರಾಮ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಸಂಸದ ಆರ್.ಧ್ರುವನಾರಾಯಣ್ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು. ಬಳಿಕ ಮಾತನಾಡಿದ ಅವರು ಇಂದಿನ ಯುವಜನತೆ ಡಾ. ಬಾಬು ಜಗಜೀವನರಾಮ್ ಅವರ ಜೀವನಾದರ್ಶ, ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವ ಪೀಳಿಗೆಗೆ ಅವರ ವ್ಯಕ್ತಿತ್ವ ಜೀವನ ಚರಿತ್ರೆ ಪರಿಚಯಿಸುವ ಕಾರ್ಯ ನಡೆಯಬೇಕು. ಅವರ ಹಸಿರು ಕ್ರಾಂತಿ ಯೋಜನೆ ಸಾರ್ವಕಾಲಿಕವಾದುದು. ಅವರು ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಎಂದು ಬಣ್ಣಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೇಯರ್ ಬಿ.ಭಾಗ್ಯವತಿ, ಜಿಲ್ಲಾ ಪಂಚಾಯತ್ ಸಿ.ಇ.ಓ. ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News