ದಾವಣಗೆರೆ: ಅತ್ಯಾಚಾರ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ
Update: 2018-07-06 23:15 IST
ದಾವಣಗೆರೆ,ಜು.06: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ನ್ಯಾಯಾಲಯ ಏಳು ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ. ದಾವಣಗೆರೆಯ ಶೇಖರಪ್ಪ ನಗರ ಬಿ. ಬ್ಲಾಕ್‍ನ ನಿವಾಸಿ ಶರತ್ (24) ಶಿಕ್ಷೆಗೊಳಗಾದ ಆರೋಪಿ.
ಅಪ್ರಾಪ್ತ ಬಾಲಕಿಯು ಆಟವಾಡುತ್ತಿದ್ದ ವೇಳೆ ಮೊಬೈಲ್ ಕೊಡಿಸುವ ಆಸೆತೋರಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಬಗ್ಗೆ ಆತನ ಮೇಲೆ ದೂರು ದಾಖಲಾಗಿತ್ತು. ಈ ಬಗ್ಗೆ ದೀರ್ಘ ವಿಚಾರಣೆ ನಡೆದು ಆರೋಪಿ ತಪ್ಪಿತಸ್ಥ ಎಂದು ಸಾಬೀತಾದುದರಿಂದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ನಾಗಶ್ರೀ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾಗಿ ಶೌಕತ್‍ಅಲಿ ವಾದ ಮಂಡಿಸಿದ್ದರು.