ಮಡಿಕೇರಿ: ಅಪ್ರಾಪ್ತೆಯ ಅಪಹರಣಕ್ಕೆ ಯತ್ನ

Update: 2018-07-06 18:15 GMT

ಮಡಿಕೇರಿ, ಜು.6: ಅಪ್ರಾಪ್ತೆಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ಶುಕ್ರವಾರ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ 8:30ರ ವೇಳೆಗೆ ತನ್ನ ಮನೆಯಿಂದ ಅಮ್ಮತ್ತಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಸಂದರ್ಭ ಜೀಪಿನಲ್ಲಿ ಬಂದ ಇಬ್ಬರು ಅವಳನ್ನು ಎಳೆದಾಡಿ ಜೀಪಿನೊಳಗೆ ಕರೆದೊಯ್ಯುವ ಪ್ರಯತ್ನ ನಡೆಸಿದ್ದಾರೆ. ಆದರೆ ಈ ಸಂದರ್ಭ ಯುವತಿ ತಪ್ಪಿಸಿಕೊಂಡಿದ್ದಾಳೆ. ಈ ಬಗ್ಗೆ ಗೋಣಿಕೊಪ್ಪ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಒಂದು ಮೂಲದ ಪ್ರಕಾರ ಆಕೆಯನ್ನು ಪ್ರೀತಿಸುತ್ತಿದ್ದ ಪ್ರಿಯಕರನೇ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದ್ದು, ಪೊಲೀಸರು ಸಿಸಿ ಕ್ಯಾಮರಾದ ದೃಶ್ಯಗಳನ್ನು ಪಡೆದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News