ಕರಾವಳಿಯಲ್ಲಿ ಧಾರಾಕಾರ ಮಳೆ: ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು ಶಾಲೆಗಳಿಗೆ ರಜೆ

Update: 2018-07-07 03:05 GMT

ಮಂಗಳೂರು, ಜು. 7: ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತಿದ್ದು, ಮುನ್ನೆಚ್ಚರಿಕೆಗಾಗಿ ಸುಳ್ಯ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಶಾಲೆಗಳಿಗೆ ಶಿಕ್ಷಣಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಮೂಡುಬಿದಿರೆ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಬಗ್ಗೆ ಯಾವುದೇ ಆದೇಶ ಬಂದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News