×
Ad

ಉಡುಪಿ: ಕೃತಿ ಪ್ರಕಟಣೆಗೆ ಅರ್ಜಿ ಆಹ್ವಾನ

Update: 2018-07-08 17:38 IST

ಉಡುಪಿ, ಜು.8: ಕನ್ನಡ ಪುಸ್ತಕ ಪ್ರಾಧಿಕಾರ ರೂಪಿಸಿರುವ ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35,000ರೂ. ಪ್ರೊತ್ಸಾಹಧನ ನೀಡುವ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.

18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸ ಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾ ವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗನ್ನು ಪರಿಗಣಿಸಲಾಗುವುದಿಲ್ಲ.

ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸ ಲಾಗುವುದಿಲ್ಲ. ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿ ಕಾರ, ಕನ್ನಡ ಭವನ, ಬೆಂಗಳೂರು ಇಲ್ಲಿಗೆ ಜು.21ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಬೆಂಗಳೂರು ವೆಬ್‌ಸೈಟ್: www.kannadapustakapradhikara.com, ದೂರವಾಣಿ ಸಂಖ್ಯೆ: 080-22484516 / 22017704 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News