ಜು. 9ರಂದು ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
Update: 2018-07-08 20:13 IST
ಮಂಗಳೂರು, ಜು.8: ತೀವ್ರ ಮಳೆ ಹಿನ್ನೆಲೆಯಲ್ಲಿ ಜು. 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಜು. 9ರಂದು ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಜು.11ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.