ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಸಚಿವ ಡಿ.ಕೆ.ಶಿವಕುಮಾರ್ ಸೂಚನೆ

Update: 2018-07-08 14:55 GMT

ಹಾಸನ, ಜು.08: ಹಾಸನ ಜಿಲ್ಲೆ ಸೇರಿದಂತೆ ಬಯಲುಸೀಮೆಯ ವಿವಿಧ ಭಾಗಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷಿಯ ಯೋಜನೆ ಎತ್ತಿಹೊಳೆಗೆ ಇಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಕಲೇಶಪುರದ ಎತ್ತಿನಹೊಳೆಯಲ್ಲಿ ಸುರಿವ ಮಳೆಯ ನಡುವೆಯೂ ಈವರೆಗೆ ಆಗಿರುವ ಕಾಮಗಾರಿಗಳು ಹಾಗೂ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದ ಸಚಿವರು ತ್ವರಿತವಾಗಿ ಯೋಜನೆಯ ಲಾಭ ಬಯಲು ಸೀಮೆಯ ಜನರಿಗೆ ತಲುಪುವಂತೆ ಕಾಲ ಮಿತಿಯೊಳಗೆ ಕೆಲಸ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಲೆನಾಡಿನಲ್ಲಿ ವರ್ಷದಲ್ಲಿ ಆರು ತಿಂಗಳು ಮಳೆಯಾಗಿ ನಿರ್ದಿಷ್ಟ ಸಮಯದಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗುತ್ತಿಲ್ಲ ಮುಂದಿನ ದಿನಗಳಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಈಗಾಗಲೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News