ಲೋಕಸಭೆ ಚುನಾವಣೆ ಒಗ್ಗಟ್ಟಿನಿಂದಲೇ ಎದುರಿಸುತ್ತೇವೆ: ಸಚಿವ ಶಿವಾನಂದ ಪಾಟೀಲ್

Update: 2018-07-08 15:14 GMT

ಬಾಗಲಕೋಟೆ, ಜು. 8: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಆಡಳಿತದಲ್ಲಿದ್ದು ಮುಂದಿನ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಎದುರಿಸಲಿದ್ದೇವೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ರವಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸೀಟು ಹೊಂದಾಣಿಕೆಯ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಹೆಚ್ಚಿನ ಸ್ಥಾನಗಳ ಬರಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿನ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ತಮಗೆ ನೋವಿದ್ದು, ಕಾಲ ಮಿತಿಯಲ್ಲಿ ನೀರಾವರಿ ಯೋಜನೆಗಳು ಮುಗಿದಿದ್ದರೆ ರಾಜ್ಯಕ್ಕೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಸ್ಥಿತಿಗೆ ಯಾರೂ ಕಾರಣವೆಂದು ಹೇಳುವುದಿಲ್ಲ. ನೀರಾವರಿಗೆ ಸೂಕ್ತ ಆದ್ಯತೆ ನೀಡಬೇಕು ಎಂದರು.

ಬಿಜೆಪಿ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆಂಬ ಬಾಳೆಹೊನ್ನೂರಿನ ರಂಭಾಪುರ ಶ್ರೀಗಳ ಹೇಳಿಕೆಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News