×
Ad

'ತಂಬಾಕು ಸೇವನೆಯಿಂದ ಜಗತ್ತಿನಲ್ಲಿ ಪ್ರತಿ ಸೆಕೆಂಡ್‍ಗೆ ಒಬ್ಬರ ಸಾವು'

Update: 2018-07-08 21:42 IST

ಮಂಡ್ಯ, ಜು.8: ಶೇ.40ರಷ್ಟು ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದು, ತಂಬಾಕು ಸೇವನೆ ಜಗತ್ತಿನಲ್ಲಿ ಜನರ ಸಾವಿಗೆ ಎರಡನೇ ಅತಿದೊಡ್ಡ ಕಾರಣವಾಗಿದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಮರಿಸ್ವಾಮಿ ಹೇಳಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ದೊಡ್ಡ ಹಾರೋಹಳ್ಳಿ ಗ್ರಾಮದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಕುರಿತ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ತಂಬಾಕು ಬಳಕೆಯಿಂದ ಜಗತ್ತಿನಲ್ಲಿ ಪ್ರತಿ ಸೆಕೆಂಡ್‍ಗೆ ಒಬ್ಬರು ಮರಣ ಹೊಂದುತ್ತಿದ್ದಾರೆ. ಭಾರತದಲ್ಲಿ 10 ಲಕ್ಷ ಮಂದಿ ತಂಬಾಕು ಸಂಬಂಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆಯಿಂದ ಮುಕ್ತರಾಗಿ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಡಾ.ಹೇಮಲತಾ ತಂಬಾಕು ಸೇವನೆಯಿಂದ ಆಗುವ ತೊಂದರೆಗಳು, ಬಾಯಿ ಕ್ಯಾನ್ಸರ್, ಹೃದಯಾಘಾತ, ಶ್ವಾಸಕೋಶದ ಕಾಯಿಲೆಗಳ ಬಗ್ಗೆ,  ಜಿಲ್ಲಾ ತಂಬಾಕು ನಿಯಂತ್ರಣ ಕೇಂದ್ರದ ಜಿಲ್ಲಾ ಸಲಹೆಗಾರ ತಿಮ್ಮರಾಜು ಕೋಟ್ಪಾ ಕಾಯ್ದೆ ಕುರಿತು ತಿಳಿಸಿಕೊಟ್ಟರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಗ್ರಾಪಂ ಸದಸ್ಯ ಚೇತನ್, ಮುಖ್ಯ ಶಿಕ್ಷಕ ಶ್ರೀನಿಧಿ, ಕಿರಿಯ ಆರೋಗ್ಯ ಸಹಾಯಕಿ ಮಂಜುಳಾ, ಹಿರಿಯ ಆರೋಗ್ಯ ಸಹಾಯಕ ಶಶಿಧರ್, ಶ್ವೇತಲತಾ, ಮಹೇಶ್, ಮನೋಹರ್ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News