ಬೆಂಗಳೂರು: ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ

Update: 2018-07-08 16:17 GMT

ಬೆಂಗಳೂರು, ಜು.8: ಮಾಗಡಿ ರಸ್ತೆಯ ಮಿನರ್ವ ಮಿಲ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಬಸ್, ಆಟೊ ಸೇರಿ ಮೂರು ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಹೋಗಿವೆ.

ರವಿವಾರ ಈ ಘಟನೆ ನಡೆದಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಮಾಗಡಿ ರಸ್ತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News