ಬಡವರಿಗೆ ಉಚಿತ ಚಿಕಿತ್ಸೆ ನೀಡಲು ದಿಲ್ಲಿಯ ಖಾಸಗಿ ಆಸ್ಪತ್ರೆಗಳಿಗೆ ಸುಪ್ರೀಂ ಕೋರ್ಟ್ ಆದೇಶ

Update: 2018-07-09 06:21 GMT

ಹೊಸದಿಲ್ಲಿ, ಜು.9:ಸರಕಾರದಿಂದ ರಿಯಾಯತಿ ದರದಲ್ಲಿ ಪಡೆದ ಜಮೀನಿನಲ್ಲಿ ಕಾರ್ಯಾಚರಿಸುತ್ತಿರುವ ದಿಲ್ಲಿಯ ಖಾಸಗಿ ಆಸ್ಪತ್ರೆಗಳು ಆರ್ಥಿಕವಾಗಿ ಹಿಂದುಳಿದಿರುವ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.

ಸರಕಾರದ ಜೊತೆ ಖಾಸಗಿ ಆಸ್ಪತ್ರೆಗಳು ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಬಡವರಿಗೆ  ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ ಎನ್ನುವ ಬಗ್ಗೆ  ಮಾಹಿತಿ ಕೇಳಿರುವ ಸುಪ್ರೀಂ ಕೋರ್ಟ್  ಈ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು  ನಿಯಮಗಳನ್ನು ಉಲ್ಲಂಘಿವುದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಸ್ಪತ್ರೆಗಳು ಎಷ್ಟು ಬಡರೋಗಿಗಳಿಗೆ ಉಚಿತ ಸೇವೆ ನೀಡಿದೆ ಎನ್ನುವ ಬಗ್ಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ದಿಲ್ಲಿಯ ಸರಕಾರಕ್ಕೆ ಆದೇಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News