ಬಿಎಸ್ಸೆನ್ನೆಲ್ ಕಚೇರಿಯೆದುರು ಸಿಐಟಿಯು ಪ್ರತಿಭಟನೆ

Update: 2018-07-09 10:59 GMT

ಮಂಗಳೂರು, ಜು.9: ಜಿಲ್ಲೆಯ ಬೇರೆ ಬೇರೆ ಎಕ್ಸ್‌ಚೇಂಜ್‌ಗಳಲ್ಲಿ ದುಡಿಯುತ್ತಿರುವ 90 ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಬಿಎಸ್ಸೆನ್ನೆಲ್ ಆಡಳಿತ ವರ್ಗದ ಕ್ರಮವನ್ನು ಖಂಡಿಸಿ ಸೋಮವಾರ ಪಾಂಡೇಶ್ವರದಲ್ಲಿರುವ ಬಿಎಸ್ಸೆನ್ನೆಲ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಬಿಎಸ್ಸೆನ್ನೆಲ್ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್‌ನ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯು ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಜಾಗೊಳಿಸಲ್ಪಟ್ಟ ಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯ ಕೇಳಿಬಂತು.

ಪ್ರತಿಭಟನೆಯ ನೇತೃತ್ವವನ್ನು ಬಿಎಸ್ಸೆನ್ನೆಲ್ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್ (ಸಿಐಟಿಯು) ಅಧ್ಯಕ್ಷ ವಸಂತ ಆಚಾರಿ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News