ತಾಜ್ ಮಹಲ್ ಆವರಣದಲ್ಲಿ ಸ್ಥಳೀಯರಲ್ಲದವರು ನಮಾಝ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

Update: 2018-07-09 09:10 GMT

ಹೊಸದಿಲ್ಲಿ, ಜು.9: ತಾಜ್ ಮಹಲ್ ಆವರಣದಲ್ಲಿರುವ ಮಸೀದಿಯಲ್ಲಿ ಸ್ಥಳೀಯರಲ್ಲದ, ಹೊರಗಿನ ವ್ಯಕ್ತಿಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲನ್ನು ರಕ್ಷಿಸಬೇಕು ಎಂದು ಕೋರ್ಟ್ ಹೇಳಿದ್ದು, ತಾಜ್ ಮಹಲ್ ನಲ್ಲಿ ಪ್ರಾರ್ಥನೆ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದಿದೆ. ಶುಕ್ರವಾರದಂದು  ತಾಜ್ ಮಹಲ್ ಆವರಣದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಸೂಕ್ತ ದಾಖಲೆಯಿದ್ದ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಬೇಕೆಂದು ಜಿಲ್ಲಾಡಳಿತ ಜನವರಿ 24ರಂದು ಆದೇಶ ಹೊರಡಿಸಿತ್ತು.

ಈ ಆದೇಶದ ವಿರುದ್ಧ ಅರ್ಜಿದಾರರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News