ಅಡ್ಯಾರ್‌ಪದವು: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ
Update: 2018-07-09 18:12 IST
ಮಂಗಳೂರು, ಜು. 9: ಹೊರವಲಯದ ಅಡ್ಯಾರ್‌ಪದವಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಮೃತಪಟ್ಟ ಬಾಲಕನನ್ನು ಹಸನಬ್ಬ ಎಂಬವರ ಪುತ್ರ ಮುಹಮ್ಮದ್ ತಮೀಮ್ (13) ಎಂದು ಗುರುತಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ತಮೀಮ್ ಕೋರೆಯಲ್ಲಿ ನಿಂತಿದ್ದ ಮಳೆ ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದು, ಈ ವೇಳೆ ಬಾಲಕ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವುದಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.