ವಿವಿಧ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ
Update: 2018-07-09 18:52 IST
ಮಂಗಳೂರು, ಜು.9: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಸಿಜೆಎಂ 2ನೇ ನ್ಯಾಯಾಲಯ ಜು. 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಯನ್ನು ಆಂಡ್ರೋ ಸುರೇಶ್ ರೋಡ್ರಿಗಸ್ ಎಂದು ತಿಳಿದುಬಂದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿ ಕಲಂ 468, 406, 420 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ರೋಡ್ರಿಗಸ್‌ನನ್ನು ಗೋವಾದ ಡೆಬೊಲಿಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸರ್ಕ್ಯುಲರ್ ಮೂಲಕ ಮಂಗಳೂರು ದಕ್ಷಿಣ ಪೊಲೀಸರು ವಶಕ್ಕೆ ಪಡೆದಿದ್ದರು.
ರೋಡ್ರಿಗಸ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮಂಗಳೂರು ಉತ್ತರ ಪೊಲೀಸ್ ಠಾಣಾ ಅ.ಕ್ರ.ನಂ. 68/2014 ಕಲಂ 302, 202 ಜೊತೆಗೆ 34 ಐಪಿಸಿ ಪ್ರಕರಣದ ಕುಮಾರ್ ಎಂಬವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಷಯ ಬೆಳಕಿಗೆ ಬಂದಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಜು. 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.