×
Ad

ಮಡಿಕೇರಿ: ಸರಕಾರಿ ಶಾಲಾ ಆವರಣದಲ್ಲೇ ಕಾಡಾನೆಗಳ ಹಿಂಡು; ಬೆಚ್ಚಿ ಬಿದ್ದ ಗ್ರಾಮಸ್ಥರು

Update: 2018-07-09 23:44 IST

ಮಡಿಕೇರಿ ಜು.9: ಶಾಲೆಯ ಆವರಣದಲ್ಲಿ ನಾಲ್ಕಕ್ಕೂ ಅಧಿಕ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಘಟನೆ ಇಂದು    ಸಿದ್ದಾಪುರ ಸಮೀಪದ ಗುಹ್ಯದಲ್ಲಿ ನಡೆದಿದೆ.

ಸಿದ್ದಾಪುರ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟು ಗ್ರಾಮಸ್ಥರ ನಿದ್ದೆಗೆಡಿಸಿರುವ ಬೆನ್ನಲ್ಲೇ ಇದೀಗ ಹಾಡಹಗಲೇ ಗುಹ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲೇ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರ ಆತಂಕವನ್ನು ಇಮ್ಮಡಿಗೊಳಿಸಿದೆ. ಶಾಲೆಗೆ ರಜೆ ಇದ್ದ ಕಾರಣ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News