ಬಿ.ಎ.ಮೊಹಿದಿನ್ ನಿಧನ: ಎಸ್.ಡಿ.ಪಿ.ಐ ಸಂತಾಪ

Update: 2018-07-10 11:04 GMT

ಮಂಗಳೂರು, ಜು. 10: ಬಿ.ಎ. ಮೊಹಿದಿನ್ ಅವರು ಸರಳ ವ್ಯಕ್ತಿತ್ವ, ಸೇವಾ ಮನೋಭಾವ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಎಸ್.ಡಿ.ಪಿ.ಐ ಮುಖಂಡ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದು, ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಿರಿಯ ಮುತ್ಸದ್ದಿ ಬಿ.ಎ. ಮೊಹಿದಿನ್ ಅವರ ನಿಧನ ಕರ್ನಾಟಕ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ ಅವರ ಸರಳ ವ್ಯಕ್ತಿತ್ವ, ಸೇವಾ ಮನೋಭಾವ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತದೆ ಎಂದು ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News