ಸಕಲ ಸರಕಾರಿ ಗೌರವಗಳೊಂದಿಗೆ ಬಜ್ಪೆಯಲ್ಲಿ ಹಿರಿಯ ಮುತ್ಸದ್ದಿ ಬಿ.ಎ.ಮೊಹಿದಿನ್‌ ಅಂತ್ಯಕ್ರಿಯೆ

Update: 2018-07-10 16:00 GMT

ಮಂಗಳೂರು, ಜು.10: ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ಮುತ್ಸದ್ದಿ ಬಜ್ಪೆ ಅಬ್ದುಲ್ ಖಾದರ್ ಮೊಹಿದಿನ್ (ಬಿ.ಎ.ಮೊಹಿದಿನ್) ಅವರ ಅಂತ್ಯ ಸಂಸ್ಕಾರವು ಮಂಗಳವಾರ ರಾತ್ರಿ  ಬಜ್ಪೆ ಈದ್ಗಾ ಜುಮಾ ಮಸ್ಜಿದ್ ಬಳಿ ನಡೆಯಿತು.

ಅದಕ್ಕೂ ಮೊದಲು ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು. ದ.ಕ. ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸರಕಾರಿ ಗೌರವ ನೆರವೇರಿಸಿಕೊಟ್ಟರು.

ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮುಂಜಾನೆ ನಿಧನರಾದ ಮೊಹಿದಿನ್ ಅವರ ಮೃತದೇಹವನ್ನು ವಿಶೇಷ ಎಸ್ಕಾರ್ಟ್ ವಾಹನದ ಬೆಂಗಾವಲಿನೊಂದಿಗೆ ಮಂಗಳೂರಿಗೆ ತರಲಾಯಿತು. ಸಂಜೆ ಸುಮಾರು 4:50ಕ್ಕೆ ಬಜ್ಪೆ ಸಮೀಪದ ಮುರನಗರದಲ್ಲಿರುವ ಸ್ವಗೃಹಕ್ಕೆ ತಂದು ಅಲ್ಲಿ ಅಂತಿಮ ದರ್ಶನಕ್ಕಿಡಲಾಯಿತು. ಈ ಸಂದರ್ಭ ಕುಟುಂಬದ ಸದಸ್ಯರು ಹಾಗೂ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಆಪ್ತರು ಪಾಲ್ಗೊಂಡಿದ್ದರು.

ಗಣ್ಯರಿಂದ ಅಂತಿಮ ದರ್ಶನ: ರಾಜ್ಯ ವಿಧಾನ ಸಭೆಯ ಸ್ಪೀಕರ್ ರಮೇಶ್ ಕುಮಾರ್, ವಸತಿ ಸಚಿವ ಯು.ಟಿ.ಖಾದರ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾಧಿಕಾರಿ ಸಸಿಕುಮಾರ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಯನೆಪೊಯ ಸಮೂಹ ಸಂಸ್ಥೆಗಳ ಅಧ್ಯಕ್ಷ ವೈ. ಮುಹಮ್ಮದ್ ಕುಂಞಿ, ಯನೆಪೊಯ ವಿವಿಯ ಕುಲಪತಿ  ವೈ ಅಬ್ದುಲ್ಲಾ ಕುಂಞಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯ ಯು.ಟಿ. ಇಫ್ತಿಕಾರ್ ಅಲಿ, ಹಿರಿಯ ಜಾನಪದ ವಿದ್ವಾಂಸ ಪ್ರೊ. ಬಿ.ಎ.ವಿವೇಕ ರೈ, ಮಾಜಿ ಶಾಸಕರಾದ ಬಿ.ಎ. ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಮಂಗಳೂರು ಮೇಯರ್ ಭಾಸ್ಕರ ಮೊಯ್ಲಿ, ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮನಪಾ ಆಯುಕ್ತ ಮುಹಮ್ಮದ್ ನಝೀರ್,  ಉದ್ಯಮಿಗಳಾದ ಸೈಯದ್ ಮುಹಮ್ಮದ್ ಬ್ಯಾರಿ, ಸಿದ್ದೀಕ್ ಬ್ಯಾರಿ, ಎಸ್.ಎಂ. ರಶೀದ್ ಹಾಜಿ, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎಂ.ಬಿ.ಅಬ್ದುಲ್ ರಹ್ಮಾನ್, ಬಿ.ಎ.ಮುಹಮ್ಮದ್ ಹನೀಫ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಹಿದಾಯ ಫೌಂಡೇಶನ್‌ನ ಖಾಸಿಂ ಅಹ್ಮದ್, ರಾಜ್ಯ ಆಹಾರ ಆಯೋಗದ ಸದಸ್ಯ ಮುಹಮ್ಮದ್ ಅಲಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಾಜಿ ಮೇಯರ್‌ಗಳಾದ ದಿವಾಕರ, ಗುಲ್ಜಾರ್ ಬಾನು, ಶಶಿಧರ ಹೆಗ್ಡೆ, ಉಪಮೇಯರ್ ಬಶೀರ್ ಬೈಕಂಪಾಡಿ, ಜಿಪಂ ಸದಸ್ಯರಾದ ಕೆ.ಕೆ.ಶಾಹಲ್ ಹಮೀದ್, ಪ್ರಕಾಶ್ ಶೆಟ್ಟಿ ತುಂಬೆ, ಅಕ್ಷರ ಸಂತ ಹರೇಕಳ ಹಾಜಬ್ಬ, ಬ್ಯಾರಿ ಅಕಾಡಮಿಯ ಸದಸ್ಯ ಅಬ್ದುರ್ರಹ್ಮಾನ್ ಕುತ್ತೆತ್ತೂರು ಸಹಿತ ಸಾವಿರಾರು ಮಂದಿ ಅಂತಿಮ ದರ್ಶನಗೈದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News