ಅಫ್ಘಾನ್: ಆತ್ಮಹತ್ಯಾ ಸ್ಫೋಟ; 12 ಸಾವು

Update: 2018-07-10 16:10 GMT

ಜಲಾಲಾಬಾದ್ (ಅಫ್ಘಾನಿಸ್ತಾನ), ಜು. 10: ಅಫ್ಘಾನಿಸ್ತಾನದ ಜಲಾಲಾಬಾದ್ ನಗರದಲ್ಲಿ ಮಂಗಳವಾರ ಭದ್ರತಾ ಪಡೆ ವಾಹನವೊಂದರ ಸಮೀಪ ಆತ್ಮಹತ್ಯಾ ಬಾಂಬರ್ ಒಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಾಗ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ನಾಗರಿಕರು.

ಸ್ಫೋಟದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಂತೀಯ ಗವರ್ನರ್‌ರ ವಕ್ತಾರರೊಬ್ಬರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

ಸ್ಫೋಟದ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News