ಮೈಸೂರು: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ
Update: 2018-07-10 23:01 IST
ಮೈಸೂರು,ಜು.10: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಆದ್ಯತೆ ನೀಡಬೇಕು. ಅಂಗನವಾಡಿಗೆ ಸಹಾಯಕಿಯರನ್ನು ಕಡ್ಡಾಯವಾಗಿ ನೇಮಿಸಬೇಕು. ಅಂಗನವಾಡಿ ನೌಕರರಿಗೆ ಹೆರಿಗೆ ರಜೆ, ಖಾಯಿಲೆಗಳು ಬಂದಾಗ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಮಳೆಯಲ್ಲಿಯೂ ಗನಹೌಸ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುತ್ತಾ ಸಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಪುಷ್ಪಲತಾ, ಶಕುಂತಲಾ, ವನಜಾಕ್ಷಿ, ನಿರ್ಮಲ, ಸೌಮ್ಯ ಸೇರಿದಂತೆ ಹಲವು ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.