ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆ ಜಿಲ್ಲೆಗೆ ಶಾಪ: ಶಾಸಕ ಗೋವಿಂದ ಕಾರಜೋಳ

Update: 2018-07-11 12:31 GMT

ಬೆಂಗಳೂರು, ಜು. 11: ‘ಬಾದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದು ಬಾಗಲಕೋಟೆ ಜಿಲ್ಲೆಗೆ ವರ ಆಗುವ ಬದಲು ಶಾಪವಾಗಿದೆ’ ಎಂದು ಬಿಜೆಪಿ ಸದಸ್ಯ ಗೋವಿಂದ ಕಾರಜೋಳ ಹೇಳಿದ್ದಾರೆ.

ಬುಧವಾರ ವಿಧಾನಸಭೆಯ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯನವರನ್ನು ಸೋಲಿಸಿದರೂ ಬಾದಾಮಿ ಕ್ಷೇತ್ರದಿಂದ ಅವರನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದೇವೆ. ಆದರೆ, ಸಿದ್ದರಾಮಯ್ಯರ ಮೇಲಿನ ಸಿಟ್ಟಿಗೆ ಸಿಎಂ ಕುಮಾರಸ್ವಾಮಿ ಬಜೆಟ್‌ನಲ್ಲಿ ಬಾಗಲಕೋಟೆಗೆ ಯಾವುದೇ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಾದಾಮಿ, ಐಹೊಳೆ, ಪಟ್ಟದಕಲ್ಲು ಸೇರಿದಂತೆ ಆ ಭಾಗದ ಪ್ರವಾಸಿತಾಣಗಳ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಾದಾಮಿ ಕ್ಷೇತ್ರಕ್ಕೆ ಸಮರ್ಪಕ ರಸ್ತೆ ಸಂಪರ್ಕವಿಲ್ಲದ ಕಾರಣ ವಿದೇಶಿ ಪ್ರವಾಸಿಗರು ಅಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಾದಾಮಿ ಅಥವಾ ಬಾಗಲಕೋಟೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಾರಜೋಳ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News