​ಮಂಗಳೂರು: ವಿಶ್ವ ಜನಸಂಖ್ಯಾ ದಿನಾಚರಣೆ

Update: 2018-07-11 15:15 GMT

ಮಂಗಳೂರು, ಜು.11: ದ.ಕ.ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಬುಧವಾರ ನಗರದ ಪುರಭವನದಲ್ಲಿ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಕಾರ್ಯಕ್ರಮ ಜರುಗಿತು.

ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಿ ‘ಜನಸಂಖ್ಯೆ ಹೆಚ್ಚಳದಿಂದ ದೇಶದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡುತ್ತಿರುವುದು ಶ್ಲಾಘನೀಯ. ನಗರ ಪ್ರದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಇದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯು ಶಿಕ್ಷಣ ವಂಚಿತ, ಮೂಡನಂಬಿಕೆಗಳಿಗೆ ತುತ್ತಾಗಿರುವ ಗ್ರಾಮೀಣ ಪ್ರದೇಶಗಳ ಜನರಿಗೆ ಇಂತಹ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಯಿಂದ ಬಡತನ, ಆರೋಗ್ಯ ಮತ್ತು ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿವೆ. ಇವೆಲ್ಲವನ್ನೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಮುಂದಾಗಬೇಕು ಎಂದರು.

ದ.ಕ.ಜಿಪಂ ಸಿಇಒ ಡಾ. ಎಂ.ಆರ್.ರವಿ ಮಾತನಾಡಿ ಹೆಚ್ಚುತ್ತಿರುವ ಜನಸಂಖ್ಯೆಗೆ ತಪ್ಪು ಕಲ್ಪನೆ, ಮಾಹಿತಿಯ ಕೊರತೆಯೇ ಕಾರಣ. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದರು.

ಡಾ.ಪಿ. ದಯಾನಂದ ಪೈ- ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್ ಉಪನ್ಯಾಸ ನೀಡಿದರು. ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಸವಿತಾ, ನವೀನ್ ಕುಮಾರ್, ದಮಯಂತಿ ಉಪಸ್ಥಿತರಿದ್ದರು. ಸಿಕಂದರ್ ಪಾಷಾ ಸ್ವಾಗತಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News