×
Ad

ಡಿವೈಎಸ್ಪಿ ಹುದ್ದೆ ಕೊಡಿಸುವುದಾಗಿ ವಂಚನೆ: ಮಹಿಳೆ ಸೇರಿ ಐವರ ಬಂಧನ

Update: 2018-07-11 19:06 IST

ಬೆಂಗಳೂರು, ಜು.11: ಡಿವೈಎಸ್ಪಿ ಸೇರಿ ಇನ್ನಿತರೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ವಸೂಲಿ ಮಾಡಿ ವಂಚನೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಮಹಿಳೆ ಸೇರಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಲೋಕೇಶ್(39), ಬಿ.ಕೆ.ಲಕ್ಷ್ಮೀಕಾಂತ್(41), ಕೆ.ಪಿ.ರಾಜೇಶ್(44), ಎಚ್.ನಾಗರಾಜ್(62) ಹಾಗೂ ಶಬಾನಾಬೇಗಂ(39) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡು, ಕೋಲಾರ ಸೇರಿದಂತೆ ಇನ್ನಿತರೆ ಜಿಲ್ಲೆಗಳ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು, ಸರಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಲಕ್ಷಾಂತರ ನಗದು ವಸೂಲಿ ಮಾಡಿ, ವಂಚನೆ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News