×
Ad

ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Update: 2018-07-11 19:13 IST

ದಾವಣಗೆರೆ, ಜು.11: ಜಗಳೂರಿನ ವಲಯ ಅರಣ್ಯಾಧಿಕಾರಿ ಎಚ್.ರಾಮಮೂರ್ತಿ ಅವರ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಪ್ರಮಾಣಕ್ಕಿಂತ ಹೆಚ್ಚು ಆಸ್ತಿ-ಪಾಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಬುಧವಾರ ಬೆಳಗ್ಗೆ ಚಿತ್ರದುರ್ಗದ ಕೋಟೆ ರಸ್ತೆಯ ನಿವಾಸ, ತರೀಕೆರೆಯ ಭಕ್ತನ ಕಟ್ಟೆಯ ತೋಟದ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು ಎಂದು ಎಸಿಬಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News