×
Ad

ದಂಪತಿ ನಿಗೂಢ ಸಾವು ಪ್ರಕರಣ: ತನಿಖೆ ಚುರುಕು

Update: 2018-07-11 19:14 IST

ಬೆಂಗಳೂರು, ಜು.11: ಗ್ಯಾಸ್ ಗೀಸರ್‌ನಿಂದ ಅನಿಲ ಸೋರಿಕೆ ಉಂಟಾಗಿ ದಂಪತಿ ಮೃತಪಟ್ಟಿದ್ದಾರೆಂದು ಶಂಕಿಸಿ ಇಲ್ಲಿನ ಆರ್‌ಆರ್‌ನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮನೆಯ ಸ್ನಾನದ ಕೊಠಡಿಯಲ್ಲಿ ವೆಂಟಿಲೇಟರ್ ಸರಿಯಾದ ರೀತಿ ಇಲ್ಲದ ಕಾರಣ ದಂಪತಿ ಮೃತಪಟ್ಟಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಮಹೇಶ್ ಹಾಗೂ ಶೀಲಾ ದಂಪತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬಂದ ನಂತರವೇ ಸಾವು ಹೇಗೆ ಸಂಭವಿಸಿದೆ ಎಂಬುದು ತಿಳಿದುಬರಲಿದೆ.

ಪ್ರಕರಣದ ಹಿನ್ನೆಲೆ: ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪಟ್ಟಣಗೆರೆಯ ಶಿವಗಂಗಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಸಾಫ್ಟ್ ವೇರ್ ಕಂಪೆನಿಯ ಉದ್ಯೋಗಿ ಮಹೇಶ್ ಹಾಗೂ ಪತ್ನಿ ಶೀಲಾ ಮಂಗಳವಾರ ಸ್ನಾನದ ಕೊಠಡಿಯಲ್ಲಿ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News