ನಿಟ್ಟೆ: 14ಕ್ಕೆ ಪದವಿ ಪ್ರದಾನ

Update: 2018-07-11 15:26 GMT

ನಿಟ್ಟೆ, ಜು.12: ಇಲ್ಲಿನ ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ 19ನೇ ಬ್ಯಾಚ್‌ನ ಎಂಬಿಎ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಜು.14ರ ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 10:30ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಕಾರ್ಪೋರೇಟ್ ಸಲಹೆಗಾರ ಹರೀಶ್ ಕೆ.ವಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಕೋತ್ಸವ ಭಾಷಣ ಮಾಡಲಿದ್ದಾರೆ. ನಿಟ್ಟೆ ವಿವಿಯ ಕುಲಪತಿ ಹಾಗೂ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News