ಕೊಳ್ಳೇಗಾಲ: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

Update: 2018-07-11 16:47 GMT

ಚಾಮರಾಜನಗರ, ಜು.11: ಕೊಳ್ಳೇಗಾಲ ತಾಲೂಕಿನ ಪ್ರಭುಲಿಂಗೇಶ್ವರ ಬೆಟ್ಟದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಪ್ರಭುಲಿಂಗೇಶ್ವರ ಬೆಟ್ಟದಲ್ಲಿ ಮುಳ್ಳೂರು ಗ್ರಾಮದ ಯುವ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News