ಪ್ರಕೃತಿ ವಿಕೋಪ: ಕೊಡುಗು ಜಿಲ್ಲೆಗೆ 5 ಕೋಟಿ ಬಿಡುಗಡೆ; ಆರ್.ವಿ.ದೇಶಪಾಂಡೆ

Update: 2018-07-11 16:50 GMT

ಬೆಂಗಳೂರು, ಜು.11: ನೈಸರ್ಗಿಕ ವಿಕೋಪದಿಂದ ಕಡಿಮೆ ಪ್ರಮಾಣದಲ್ಲಿ ಮನೆಗಳಿಗೆ ಹಾನಿಯಾದರೆ ಶೇ.15 ರಿಂದ 75ರವರೆಗೆ ಪರಿಹಾರವನ್ನು ನೀಡಲಾಗುವುದು. ಹಾಗೂ ಶೇ.75ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾದರೆ 95,100 ರೂ.ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಡುಗು ಜಿಲ್ಲೆಗೆ ಪ್ರಕೃತಿ ವಿಕೋಪ ಪರಿಹಾರಕ್ಕಾಗಿ 5 ಕೋಟಿ ರೂ.ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ 10.22 ಕೋಟಿ ರೂ.ಅನುದಾನ ಲಭ್ಯವಿದೆ. ಹೀಗಾಗಿ, ಕೇಂದ್ರ ಸರಕಾರದ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ 2018ರ ಮೇ ಯಿಂದ ಜು.6ರವರೆಗೆ ಮಾನವ ಪ್ರಾಣ ಹಾನಿ 3, ವಾಸದ ಮನೆ ಹಾನಿ 143, 1 ಜಾನುವಾರು ಪ್ರಾಣ ಹಾನಿ ಸಂಭವಿಸಿದೆ. ಒಟ್ಟು 49.26 ಲಕ್ಷ ರೂ.ಪರಿಹಾರ ನೀಡಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೆ ಸಂಬಂಧಿಸಿದಂತೆ 1679.25 ಲಕ್ಷ ರೂ.ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News