ನನ್ನ ಟ್ವೀಟ್ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಕ್ಷಮೆಯಾಚಿಸಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್

Update: 2018-07-11 16:54 GMT

ಬೆಂಗಳೂರು, ಜು.11: ಮುಖ್ಯಮಂತ್ರಿಯ ಶಾಲಾ ಪ್ರಸ್ತಾವನೆಯನ್ನು ವಿರೋಧಿಸುತ್ತಿರುವ ಚಳುವಳಿಗಾರರು ವಿಷಯವಾಗಿ ನಾನು ಮಾಡಿರುವ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ವ್ಯಕ್ತಿಗಳ ಬಗೆಗೆ ವಿವರ ನನಗೆ ತಿಳಿದಿರಲಿಲ್ಲ. ಕೇವಲ ಮುಖ್ಯ ವಿಷಯಕ್ಕೆ ಮಾತ್ರ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಜಾಗತಿಕ ಮಟ್ಟದಲ್ಲಿ ಕನ್ನಡ ಯುವಜನತೆ ಸ್ಪರ್ಧೆಗಳಲ್ಲಿ ಹೆಚ್ಚಿನ ಅವಕಾಶ ಗಳಿಸಲು ಕನ್ನಡದೊಂದಿಗೆ ಇಂಗ್ಲಿಷ್ ಅಗತ್ಯವಿದೆ ಎಂಬುದನ್ನು ಹೇಳುವುದು ನನ್ನ ಪ್ರತಿಕ್ರಿಯೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ನನಗೆ ಅಪಾರವಾದ ಗೌರವವಿದ್ದು, ನಿಮ್ಮ ಭಾವನೆಗಳನ್ನು ನೋಯಿಸುವ ಉದ್ದೇಶವಿಲ್ಲ. ನಾನು ನನ್ನ ಸಾಮಾಜಿಕ ಜವಾಬ್ದಾರಿಯೊಂದಿಗೆ ಕನ್ನಡದ ಮೇಲಿನ ಗೌರವ ಹಾಗೂ ಪ್ರೀತಿಯನ್ನು ಹಂಚಿಕೊಂಡಿದ್ದೇನೆ ಹೊರತು, ಯಾವುದೇ ದುರುದ್ದೇಶವಿಲ್ಲ ಎಂದು ಅವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News