ಶ್ರೀಲಂಕಾದ ಸ್ಪಿನ್ನರ್ ಹೆರಾತ್ ನಿವೃತ್ತಿಗೆ ನಿರ್ಧಾರ

Update: 2018-07-11 18:27 GMT

ಕೊಲಂಬೊ, ಜು.11: ಶ್ರೀಲಂಕಾದ ಹಿರಿಯ ಎಡಗೈ ಸ್ಪಿನ್ನರ್ ರಂಗನ ಹೆರಾತ್ ನವೆಂಬರ್‌ನಲ್ಲಿ ಇಂಗ್ಲೆಂಡ್ ವಿರುದ್ದ ನಡೆಯಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಬಳಿಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. 90 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 418 ವಿಕೆಟ್‌ಗಳನ್ನು ಕಬಳಿಸಿರುವ ಹೆರಾತ್ ಅವರು ಮುತ್ತಯ್ಯ ಮುರಳೀಧರನ್(800 ವಿಕೆಟ್)ಬಳಿಕ ಗರಿಷ್ಠ ವಿಕೆಟ್ ಪಡೆದ ಶ್ರೀಲಂಕಾದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ‘‘ಈ ವರ್ಷಾಂತ್ಯದಲ್ಲಿ ನಡೆಯುವ ಇಂಗ್ಲೆಂಡ್ ವಿರುದ್ಧ ಸರಣಿಯು ನನ್ನ ಕೊನೆಯ ಸರಣಿಯಾಗುವ ಸಾಧ್ಯತೆಯಿದೆ. ಪ್ರತಿಯೊಬ್ಬ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಸಮಯ ಬರುತ್ತದೆ. ನನಗೂ ಕ್ರಿಕೆಟ್ ಆಡುವುದನ್ನು ನಿಲ್ಲಿಸಲು ಸಮಯ ಬಂದಿದೆ’’ ಎಂದು 2016ರಲ್ಲಿ ಏಕದಿನ ಹಾಗೂ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಹೆರಾತ್ ಹೇಳಿದ್ದಾರೆ. ಹೆರಾತ್ ಗಾಲೆಯಲ್ಲಿ ಗುರುವಾರ ದಕ್ಷಿಣ ಆಫ್ರಿಕ ವಿರುದ್ಧ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News