ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ

Update: 2018-07-11 18:35 GMT

ಮಾನ್ಯರೇ,

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಕಳೆದ ಚುನಾವಣಾ ಸಂದರ್ಭದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ತಿಂಗಳಲ್ಲಿ ಒಂದು ದಿನ ರಾಜ್ಯದ ವಿದ್ಯಾರ್ಥಿಗಳನ್ನು ವಿಧಾನ ಸಭೆಗೆ ಕರೆಸಿ ಸಂವಾದ ನಡೆಸಿ ಸಮಸ್ಯೆ ಅರಿಯುವ ಪ್ರಯತ್ನ ಮಾಡುತ್ತೇನೆ ಎಂದಿದ್ದರು.
ಹಾಗೆಯೇ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಲು ಹಾಗೂ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಅತ್ಯಾಚಾರಿಗಳಿಗೆ ಕಂಡಲ್ಲಿ ಗುಂಡು ಆದೇಶ ಹೊರಡಿಸುತ್ತೇನೆ ಎಂದಿದ್ದರು. ಈಗ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಆಡಳಿತ ನಡೆಸುತ್ತಿದೆ, ಕುಮಾರ ಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಮೇಲಿನ ಹೇಳಿಕೆಗಳತ್ತ ಗಮನಹರಿಸಬಹುದಲ್ಲವೇ?
ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪ್ರಾಪ್ತ ವಯಸ್ಸಿನ, ಮುಗ್ಧ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ದಿನನಿತ್ಯ ವರದಿಯಾಗುತ್ತಿದೆ. ಅತ್ಯಾಚಾರಕ್ಕೊಳಗಾದವರು ಸಮಾಜಕ್ಕೆ ಹೆದರಿ ಮೊಕದ್ದಮೆ ದಾಖಲಿಸಲು ಹಿಂಜರಿಯುವುದರಿಂದಾಗಿ ಅತ್ಯಾಚಾರಿಗಳಿಗೆ ಕಾನೂನಿನ ಭಯವೇ ಇಲ್ಲವಾಗಿದೆ.
ಆದ್ದರಿಂದ ಸರಕಾರ ಅತ್ಯಾಚಾರಿಗಳ ವಿಷಯದಲ್ಲಿ ಯಾವುದೇ ಕನಿಕರ ತೋರದೆ ಕಠಿಣವಾಗಿ ವರ್ತಿಸಬೇಕಾಗಿದೆ.

Writer - -ಜೆ. ಎಫ್. ಡಿ’ಸೋಜಾ, ಮಂಗಳೂರು

contributor

Editor - -ಜೆ. ಎಫ್. ಡಿ’ಸೋಜಾ, ಮಂಗಳೂರು

contributor

Similar News