ಆಳ್ವಾಸ್‍ನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Update: 2018-07-12 12:45 GMT

ಮೂಡುಬಿದಿರೆ,ಜು.12: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜೀವಿಸುತ್ತಿರುವ ನಮಗೆ ಕಾನೂನಿನ ಅರಿವು, ಪಾಲನೆ ಅಗತ್ಯ. ಕಾನೂನಿನ ಚೌಕಟ್ಟಿನಲ್ಲಿ ಬದುಕುವುದರಿಂದ ಸಮಾಜ ಶಾಂತಿ ನೆಲೆಸುತ್ತದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಕೆ.ಎಸ್ ಬೀಳಗಿ ಹೇಳಿದರು. 

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗಾಗಿ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾನೂನು ಅರಿವು ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು. ಒಂದು ಗುರಿಯನ್ನು ಇಟ್ಟುಕೊಂಡು ವಿದ್ಯಾರ್ಥಿಗಳು ಸಾಧನೆ ಮಾಡುವುದಲ್ಲ. ಹಲವು ಗುರಿಗಳನ್ನಿಟ್ಟುಕೊಂಡು ಅವುಗಳನ್ನು ಸಾಧಿಸಲು ಶ್ರದ್ಧೆಯಿಂದ ಕೆಲಸ ಮಾಡುವ ಗುರಿಯಿರಬೇಕು ಎಂದರು. 

ಮೂಡುಬಿದಿರೆ ನ್ಯಾಯಾಲಯದ ನ್ಯಾಯಾಧೀಶ ಯಶವಂತ್ ಕುಮಾರ್ ಆರ್., ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಮೂಡುಬಿದಿರೆ ಇನ್ಸ್‍ಪೆಕ್ಟರ್ ರಾಮಚಂದ್ರ ನಾಯಕ್, ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News