×
Ad

ರಾಜ್ಯ ಯುವ ಬರಹಗಾರರ ಒಕ್ಕೂಟ ಸಮಿತಿ : ಪತ್ರಕರ್ತ ಶಂಶೀರ್ ಬುಡೋಳಿ ನೇಮಕ

Update: 2018-07-12 18:26 IST

ಮಂಗಳೂರು, ಜು.12: ರಾಜ್ಯ ಯುವ ಬರಹಗಾರರ ಒಕ್ಕೂಟದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನು ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007ರಲ್ಲಿ ನಡೆದ 11ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂಸಿಜೆ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರ ನಾಲ್ಕು ಕವನ ಸಂಕಲನಗಳು ಪ್ರಕಟಗೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News