ಎಕ್ಸಲೆಂಟ್ ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ
Update: 2018-07-12 18:40 IST
ಮೂಡುಬಿದಿರೆ, ಜು.12: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಮಹಮ್ಮದ್ ಆರಿಫ್ ಸಂಘವನ್ನು ಉದ್ಘಾಟಿಸಿ, ತಮ್ಮ ವ್ಯವಹಾರ ಕ್ಷೇತ್ರದಲ್ಲಿನ ಅನುಭವ ಹಾಗೂ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.
ವಕೀಲೆ ಶ್ವೇತಾ ಜೈನ್ ಮುಖ್ಯ ಅತಿಥಿಯಾಗಿ, ವಾಣಿಜ್ಯ ಸಂಘದ ಅವಶ್ಯಕತೆ ಮತ್ತು ಅನಿವಾರ್ಯತೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ವೃತ್ತಿ ಆಯ್ಕೆಯ ಬಗ್ಗೆ ವಿವರಿಸಿದರು.
ಸಂಸ್ಥೆಯ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ , ವಿಭಾಗ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ವಾಣಿಜ್ಯ ಸಂಘದ ಅಧ್ಯಕ್ಷೆ ಸುಯಜ್ಞ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಿಯಾಂಕ ಭಟ್ ಸ್ವಾಗತಿಸಿ ವರುಣ್ ವಂದಿಸಿದರು. ಆದಿತ್ಯ ಓಂಕಾರಿ ಕಾರ್ಯಕ್ರಮ ನಿರೂಪಿಸಿದರು.