ಕಾಂತಾವರ ಗ್ರಾಪಂಗೆ ಸಂಸದರ ಭೇಟಿ
Update: 2018-07-12 19:09 IST
ಉಡುಪಿ, ಜು.12: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇತ್ತೀಚೆಗೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಪಂಗೆ ಭೇಟಿ ನೀಡಿ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಅನುದಾದ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಿಯ್ಯರು ಕ್ಷೇತ್ರದ ಜಿಪಂ ಸದಸ್ಯೆ ದಿವ್ಯಾಶ್ರೀ ಗಿರೀಶ್ ಆಮಿನ್, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ, ಬೆಳ್ಮಣ್ ಕ್ಷೇತ್ರದ ಜಿಪಂ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಗ್ರಾಪಂ ಅಧ್ಯಕ್ಷ ಜಯ ಎಸ್. ಕೋಟ್ಯಾನ್, ಉಪಾಧ್ಯಕ್ಷೆ ಪುಷ್ಪ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತಿತರರು ಉಪಸ್ಥಿತರಿದ್ದರು.