ಶಿಥಿಲಾವಸ್ಥೆಯಲ್ಲಿರುವ 11,207 ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮ: ಎನ್.ಮಹೇಶ್

Update: 2018-07-12 14:57 GMT

ಬೆಂಗಳೂರು, ಜು, 12: ರಾಜ್ಯದ 5,588 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 10,258 ಕೊಠಡಿಗಳು ಹಾಗೂ 264 ಸರಕಾರಿ ಪ್ರೌಢ ಶಾಲೆಗಳಲ್ಲಿ 949 ಕೊಠಡಿಗಳು ಶಿಥಿಲಗೊಂಡಿರುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಆರ್. ಧರ್ಮಸೇನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 672 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಥಿಲಗೊಂಡ 760 ಕೊಠಡಿಗಳ ಮರು ನಿರ್ಮಾಣಕ್ಕಾಗಿ 6604.95 ಲಕ್ಷ ಹಾಗೂ 238 ಸರಕಾರಿ ಪ್ರೌಢ ಶಾಲೆಗಳಲ್ಲಿ ಶಿಥಿಲಗೊಂಡ 312 ಕೊಠಡಿಗಳ ಮರು ನಿರ್ಮಾಣಕ್ಕಾಗಿ 4132 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಪ್ರಸ್ತುತ ಸಾಲಿನಲ್ಲಿ 1338 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1338 ಕೊಠಡಿಗಳ ದುರಸ್ಥಿಗಾಗಿ 2866.00 ಲಕ್ಷ ಹಾಗೂ 777 ಸರಕಾರಿ ಪ್ರೌಢ ಶಾಲೆಗಳಲ್ಲಿ 777 ಕೊಠಡಿಗಳ ದುರಸ್ಥಿಗಾಗಿ 3500 ಲಕ್ಷಗಳ ಅನುದಾನವನ್ನು ಬಿಡುಡೆ ಮಾಡಲಾಗಿದೆ ಎಂದು ಹೇಳಿದರು.

2018-19ನೆ ಸಾಲಿನ ಆಯವ್ಯಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಹಂಚಿಕೆಯಾದ ಅನುದಾನದ ಲಭ್ಯತೆ ಆಧರಿಸಿ, ಸರಕಾರಿ ಶಾಲೆಗಳ ಕೊಠಡಿ ದುರಸ್ಥಿ, ಶಿಥಿಲಗೊಂಡ ಕೊಠಡಿ, ಕಟ್ಟಡಗಳ ಮರು ನಿರ್ಮಾಣಕ್ಕಾಗಿ ಆದ್ಯತೆ ಮೇರೆಗೆ ಹಂತ-ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News