ಬೈಕ್ ಕಳವು ಪ್ರಕರಣ: ಮೂವರ ಬಂಧನ
Update: 2018-07-12 20:30 IST
ಬೆಂಗಳೂರು, ಜು.12: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನೆ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಇಲ್ಲಿನ ಸುಬ್ರಹ್ಮಣ್ಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಪುನೀತ್(21), ಪೃಥ್ವಿರಾಜ್(21) ಹಾಗೂ ಮಧುಕುಮಾರ್(19) ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.
ಜೂ.1 ರಂದು ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಪ್ರಕರಣಗಳು ಬೆಳಕಿಗೆ ಬಂದಿವೆ. ಇವರಿಂದ 4.5 ಲಕ್ಷ ರೂ. ಬೆಲೆಯ 9 ಬೈಕ್‌ಗಳನ್ನು ವಶಕ್ಕೆ ತನಿಖೆ ಮುಂದುವರೆಸಲಾಗಿದೆ