ಬೆಂಗಳೂರು: ಯುವತಿಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನ; ಆರೋಪ

Update: 2018-07-12 16:30 GMT

ಬೆಂಗಳೂರು, ಜು.12: ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.

ಮೂಲತಃ ಮಂಗಳೂರು ಮೂಲದ ಸಂತ್ರಸ್ತ ಯುವತಿ ಜು.9ರಂದು ಮಂಗಳೂರಿನಿಂದ ಬಸ್ ಮೂಲಕ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಅಂದು ರಾತ್ರಿ 11 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಯುವತಿಗೆ ನಮ್ಮ ಜೊತೆಗೆ ಬರುವಂತೆ ಕೇಳಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಯುವತಿ, ಜನರಿದ್ದ ಕಡೆ ಹೋಗಲು ರಸ್ತೆ ದಾಟುತ್ತಿದ್ದಾಗ, ಆಕೆಯನ್ನು ಬಲವಂತವಾಗಿ ಹಿಡಿದು, ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಂತ್ರಸ್ತ ಯುವತಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News