ಬಿಜೆಪಿ ಯುವ ಮೋರ್ಚಾದಿಂದ ನಮೋ ಯುವ ಜಾಥಾ
Update: 2018-07-12 22:02 IST
ಮಂಗಳೂರು: ಜು.12: ಕೇಂದ್ರ ಸರಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ನಮೋ ಯೋಜನೆ ಜಾಗೃತಿ ಯುವ ಜಾಥಾವನ್ನು ಜು.15ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಿಂದ ಪ್ರಾರಂಭವಾಗಲಿದೆ ಎಂದು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಜಾಥಾ ಪುತ್ತೂರು ನಗರ- ಮಾಣಿ- ಕಲ್ಲಡ್ಕ- ಬಿ.ಸಿ.ರೋಡ್ - ಪಡೀಲ್- ನಂತೂರು- ಕೂಳೂರು ಮಾರ್ಗವಾಗಿ ಸುರತ್ಕಲ್ ಬಂಟರ ಭವನದಲ್ಲಿ ಸಮಾರೋಪಗೊಳ್ಳಲಿದೆ ಎಂದರು.
ಜಾಥಾ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.