ಕುಪ್ವಾರದಲ್ಲಿ ಎನ್‌ಕೌಂಟರ್: ಉಗ್ರನ ಹತ್ಯೆ
Update: 2018-07-12 22:20 IST
ಶ್ರೀನಗರ, ಜು. 12: ಜಮ್ಮು ಹಾಗೂ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
‘‘ಕುಪ್ವಾರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ’’ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ. ಯೋಧರು ಗಸ್ತು ನಡೆಸುತ್ತಿದ್ದ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದರು. ಅನಂತರ ಕುಪ್ವಾರದ ಕಂಡಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅವರು ತಿಳಿಸಿದ್ದಾರೆ. ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಗಂಭೀರ ಗಾಯಗೊಂಡಿದ್ದರು. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಬುಧವಾರ ಕೊನೆಯುಸಿರೆಳೆದರು ಎಂದು ಅವರು ತಿಳಿಸಿದ್ದಾರೆ.