ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳವು: ಬಂಧನ
Update: 2018-07-13 20:17 IST
ಬೆಂಗಳೂರು, ಜು.13: ಮಾಲಕನ ಮನೆಯಲ್ಲೆ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಬಂಧಿಸಿ 5.27ಲಕ್ಷ ರೂ. ಮೌಲ್ಯದ 173 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ರಾಜಾಜಿನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಗಮಂಗಲ ತಾಲೂಕು ಬ್ರಹ್ಮದೇವರಹಳ್ಳಿ ಗ್ರಾಮದ ಮನೋಜ್(21) ಬಂಧಿತ ಆರೋಪಿ. ಈತ ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನದ ಬಳೆಗಳು, ಚಿನ್ನದ ಕಡಗ, ಉಂಗುರ ಮತ್ತು ಹಣ ಕಳ್ಳತನವಾಗುತ್ತಿತ್ತು. ಈ ಬಗ್ಗೆ ಅನುಮಾನಗೊಂಡ ಮನೆ ಮಾಲಕರು ರಾಜಾಜಿನಗರ ಠಾಣೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲಸಕ್ಕಿದ್ದ ಆರೋಪಿ ಮನೋಜ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ರಾಜಾಜಿನಗರ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.