ಬೆಂಗಳೂರು: ಉಚಿತ ಬಸ್‌ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ
Update: 2018-07-13 20:19 IST
ಬೆಂಗಳೂರು, ಜು.13: ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಬೇಕು ಎಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕುದುರೆ ಏರಿ ವಿಭಿನ್ನವಾಗಿ ಹೋರಾಟ ಮಾಡಿದರು.
ನಗರದ ಕೆಂಪೇಗೌಡ ಬಸ್ ನಿಲ್ದಾಣದ ಎದುರು ಕುದುರೆ ಏರಿ ಪ್ರತಿಭಟನೆ ನಡೆಸಿದ ಅವರು, ತಮಟೆ ಬಾರಿಸುವ ಮೂಲಕ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್‌ಪಾಸ್ ನೀಡಬೇಕು ಎಂದು ಆಗ್ರಹಿಸಿದರು.
ಕುಮಾರಸ್ವಾಮಿ ನನ್ನನ್ನು ಭೇಟಿಯಾದಾಗಲೆಲ್ಲಾ ಅಣ್ಣಾ ಎಂದು ಕರೆಯುತ್ತಾರೆ. ಆದ್ರೆ ನನ್ನ ತಮ್ಮ ಇದೀಗ ರಾಜ್ಯದ ಬಡವರ, ರೈತರ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.