×
Ad

ಹನೂರು: ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮ

Update: 2018-07-13 20:39 IST

ಹನೂರು,ಜು.13: ಸರ್ಕಾರಿ ಶಾಲಾ ಮಕ್ಕಳು ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ ಎಸ್.ಡಿ.ಎಮ್.ಸಿ ಅದ್ಯಕ್ಷ ಗೋವಿಂದರಾಜ್ ತಿಳಿಸಿದರು.

ಸಮೀಪದ ಉದ್ದನೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ,  ಬಿಸಿಯೂಟಗಳನ್ನು ಒಳಗೂಂಡಂತೆ ಎಲ್ಲಾ ಸೌಕರ್ಯಗಳನ್ನು ಒದಗಿಸಿಲಾಗಿದ್ದು, ಇದರ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೂಳ್ಳಬೇಕೆಂದರು.

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಸದಸ್ಯರು ಸೇರಿದಂತೆ ಮುಖ್ಯಶಿಕ್ಷಕರಾದ ಶಂಕರಗೌಡ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News