×
Ad

ಜೂ.15: ಪಿಲಿಕುಳದ ಮತ್ಸ್ಯೋತ್ಸವ, ಕ್ಷೇತ್ರೋತ್ಸವ

Update: 2018-07-13 20:58 IST

ಮಂಗಳೂರು, ಜು.13: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ಜು.15ರಂದು ರಾಜ್ಯ ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಸೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವು ಜರುಗಲಿದೆ.

ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸುವರು. ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು ಮಾರಾಟ ಮಾಡಲಾಗುವುದು. ಅಲ್ಲದೆ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್ ಮಸಾಲಾ, ಫಿಶ್ ಕಬಾಬ್ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡ ಲಾಗುವುದು. ಇದರ ಜೊತೆಗೆ ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News