ಫೆಬ್ರವರಿಯಿಂದ 50 ರ‍್ಯಾಲಿಗಳಲ್ಲಿ ಮೋದಿ ಭಾಷಣ
Update: 2018-07-13 21:05 IST
ಹೊಸದಿಲ್ಲಿ, ಜು. 13: ಮುಂದಿನ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ವರ್ಷ ಪೆಬ್ರವರಿಯಿಂದ 100 ಲೋಕಸಭಾ ಕ್ಷೇತ್ರವನ್ನು ಒಳಗೊಳ್ಳುವಂತೆ ದೇಶಾದ್ಯಂತ ನಡೆಯುವ ರ್ಯಾಲಿಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ವರಿಷ್ಠ ಅಮಿತ್ ಶಾ, ಹಿರಿಯ ನಾಯಕ ರಾಜನಾಥ್ ಸಿಂಗ್ ಹಾಗೂ ನಿತಿನ್ ಗಡ್ಕರಿ ತಲಾ 50 ರ್ಯಾಲಿಗಳಲ್ಲಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಚಾರದ ಮೂಲ ನೆಲೆಯಾಗಿ ಈ ಎಲ್ಲ ರ್ಯಾಲಿಗಳನ್ನು ಆಯೋಜಿಸಲು ಯೋಜಿಸಲಾಗಿದೆ. ಪ್ರತಿ ರ್ಯಾಲಿ ಮೂರರಿಂದ ನಾಲ್ಕು ಲೋಕಸಭಾ ಕ್ಷೇತ್ರವನ್ನು ಒಳಗೊಳ್ಳಲಿದೆ. ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವುದಕ್ಕಿಂತ ಮುನ್ನ 200 ರ್ಯಾಲಿಗಳನ್ನು ಆಯೋಜಿಸುವ ಮೂಲಕ ಬಿಜೆಪಿ ಕನಿಷ್ಠ 400 ಲೋಕಸಭಾ ಕ್ಷೇತ್ರವನ್ನು ಒಳಗೊಳ್ಳಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.