ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ಮತ್ತೆ ಕಾಂಗ್ರೆಸ್‌ಗೆ
Update: 2018-07-13 21:09 IST
ಹೊಸದಿಲ್ಲಿ, ಜು. 13: ಕಾಂಗ್ರೆಸ್ ತ್ಯಜಿಸಿ ನಾಲ್ಕು ವರ್ಷಗಳ ಬಳಿಕ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಮತ್ತೆ ಕಾಂಗ್ರೆಸ್ ಸೇರಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಶುಕ್ರವಾರ ಭೇಟಿ ಆದ ಬಳಿಕ ಮಾಜಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ಗೆ ಹಿಂದಿರುಗಿದ್ದಾರೆ ಎಂದು ಕಾಂಗ್ರೆಸ್‌ನ ವಕ್ತಾರ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ. ಇಲ್ಲಿನ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಆಂಧ್ರಪ್ರದೇಶದ ಉಸ್ತುವಾರಿ ಉಮನ್ ಚಾಂಡಿ, ಸುರ್ಜೆವಾಲಾ ಹಾಗೂ ಎಪಿಸಿಸಿ ವರಿಷ್ಠ ಎನ್. ರಘುವೀರ್ ಅವರ ಸಮ್ಮುಖದಲ್ಲಿ ರೆಡ್ಡಿ ಕಾಂಗ್ರೆಸ್ ಸೇರಿದರು. ಆಂಧ್ರಪ್ರದೇಶದ ವಿಭಜನೆ ವಿರೋಧಿಸಿ 2014 ಫೆಬ್ರವರಿಯಲ್ಲಿ ರೆಡ್ಡಿ ಅವರು ಮುಖ್ಯಮಂತ್ರಿ ಹುದ್ದೆ ಹಾಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.