ಹಿರಿಯಡಕ: ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವತಯಾರಿ ಕಾರ್ಯಾಗಾರ
Update: 2018-07-13 22:45 IST
ಉಡುಪಿ, ಜು.13: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ಮಾಹಿತಿ ಕೋಶ ಮತ್ತು ಐಕ್ಯುಎಸಿ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಕೌಶಲ ದಿನಾಚರಣೆಯ ಪ್ರಯುಕ್ತ ಜು.18 ರಂದು ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ವಿವಿಧ ಸ್ಪರ್ಧಾತ್ಮಕ ಮತ್ತು ವೃತ್ತಿಪರ ಪರೀಕ್ಷೆಗಳನ್ನು ಎದುರಿಸುವುದು ಹೇಗೆ ? ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸಂಧ್ಯಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದು, ಸಾರ್ವಜನಿಕರು ಸಹ ಈ ಕಾರ್ಯಾಗಾರದ ಸದುಪಯೋಗ ಪಡೆಯಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ನಿಕೇತನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.