×
Ad

ಹಳೆಕೋಟೆ: ಸಯ್ಯದ್ ಮದನಿ ಶಾಲೆಯಲ್ಲಿ ವನಮಹೋತ್ಸವ

Update: 2018-07-13 22:55 IST

ಉಳ್ಳಾಲ, ಜು. 13: ಮನುಷ್ಯ ತನ್ನ ಅವ್ಯಶಕತೆಗಳ ಹೆಸರಿನಿಂದ ಮರಗಳ ನಾಶ ಮಾಡುತ್ತಿದ್ದು, ಮರ ನಾಶವಾದಲ್ಲಿ ಪರಿಸರ ಅಸಮತೋಲನ ಉಂಟಾ ಗಲಿದ್ದು, ಪರಿಸರ ಉಳಿಸಿ ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಎರಡು ಗಿಡಗಳನ್ನು ನೆಟ್ಟು ಪೋಷಿಸಿ ಅದನ್ನು ಮರವಾಗಿ ಬೆಳಸುವ ಮೂಲಕ ನಾವು ಕಾಡನ್ನು ಬೆಳಸಿ ನಾಡನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಉಳ್ಳಾಲ ಕ್ರೇಂದ್ರ ಜುಮಾ ಮಸೀದಿ ಕಾರ್ಯದರ್ಶಿ ಮಹಮ್ಮದ್ ತ್ವಾಹ ಅಭಿಪ್ರಾಯಪಟ್ಟರು.

ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯದ್ ಮದನಿ ಪ್ರೌಢ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫಾ ಅಬ್ದುಲ್ಲ ಅಧ್ಯಕ್ಷತೆ ವಹಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯು. ಎನ್ ಇಬ್ರಾಹಿಂ ಕೋಶಾಧಿಕಾರಿ ಅಬ್ದುಲ್ ಕರೀಂ ಹಾಗೂ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಆಡಳಿತಾಧಿಕಾರಿ ಅಬ್ದುಲ್ ಲತೀಫ್ ಮುಖ್ಯ ಅತಿಥಿಗಳಾಗಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಠ ತರಗತಿಯಲ್ಲಿ ತೇರ್ಗಡೆಯಾದ ಮಹಮ್ಮದ್ ಶಿಫಾರ್ನನ್ನು ಗೌರವಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ಕೆ.ಎಂ.ಕೆ ಮಂಜನಾಡಿ ಸ್ವಾಗತಿಸಿ, ಶಿಕ್ಷಕಿ ಸಪ್ನಾ ವಂದಿಸಿದರು. ಶಿಕ್ಷಕಿ ಬಬಿತಾ ಸೆಲಿನ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿ ಸಿದರು. ಸಭಾ ಕ್ರಾರ್ಯಕ್ರಮ ನಂತರ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವದ ಬಗ್ಗೆ ರಂಜನೀಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News