ಚಿನ್ನ ಗೆದ್ದು ದಾಖಲೆ ಬರೆದ ಹಿಮಾ
Update: 2018-07-13 23:44 IST
ಫಿನ್‌ಲ್ಯಾಂಡ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಂಡರ್-20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 400 ಮೀ. ಓಟದ ಫೈನಲ್‌ನಲ್ಲಿ 51.46 ಸೆಕೆಂಡ್‌ನಲ್ಲಿ ಗುರಿ ತಲುಪಿದ ಭಾರತದ ಅಥ್ಲೀಟ್ ಹಿಮಾ ದಾಸ್ ಚಿನ್ನದ ಪದಕ ಗೆದ್ದುಕೊಂಡರು. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರಾಕ್ ಇವೆಂಟ್‌ನಲ್ಲಿ ಚಿನ್ನ ಜಯಿಸಿದ ಭಾರತದ ಮೊದಲ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿರುವ ಹಿಮಾ ದಾಸ್‌ಗೆ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.