×
Ad

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

Update: 2018-07-14 17:08 IST

ಮಂಗಳೂರು, ಜು.14: ರಾಜ್ಯ ಸರಕಾರವು ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ ಎಂದು ಆಪಾದಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ವತಿಯಿಂದ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಮಾಯಕರಿಗೆ ಹಿಂಸೆ ನೀಡಲಾಗುತ್ತಿದೆ. ‘ಹಜ್ ಹೌಸ್’ಗೆ ಟಿಪ್ಪುಸುಲ್ತಾನನ ಹೆಸರನ್ನು ಕೊಡಲಾಗುತ್ತಿದೆ ಎಂದು ಪ್ರತಿಭಟನಕಾರರು ಆಪಾದಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ಚಂದ್ರ ಮೊಗೇರ, ಹಿಂದೂ ಮಹಾಸಭಾದ ಧರ್ಮೇಂದ್ರ, ಹಿಂದೂ ಯುವ ಸೇನೆಯ ವೀರಪ್ಪ, ದಯಾನಂದ ವಳಚ್ಚಿಲ್, ಸತೀಶ್ ಉರ್ವ, ಮಂಜುನಾಥ ಅಡ್ಯಾರ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News